Latest

ಡಿಕೆಶಿ ಬೆನ್ನಿಗೆ ನಿಲ್ಲದ ಎಚ್ ಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪ್ರಾಮಾಣಿಕವಾಗಿದ್ದರೆ ಯಾವುದೇ ದಾಳಿಗೂ ಹೆದರುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವೋ, ಇಲ್ಲವೋ ಎಂದು ನಾನು ಹೇಳಲಾರೆ. ಆದರೆ ಪ್ರಾಮಾಣಿಕರಾಗಿದ್ದರೆ ಯಾವುದೇ ದಾಳಿಗೆ ಭಯಪಡಬೇಕಿಲ್ಲ. ಸತ್ಯ ಏನೆಂಬುದು ತನಿಖೆ ನಂತರ ಹೊರಬರುತ್ತದೆ. ಸತ್ಯಕ್ಕೆ ಜಯ ಸಿಗಬೇಕು ಎಂದು ಹೇಳಿದರು.

Home add -Advt

ಇದೇ ವೇಳೆ ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ ಎಂದು ಹೇಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ಸಿದ್ದರಾಮಯ್ಯನವರ ಇತಿಹಾಸ ನೋಡಿದರೆ ಅವರ ಸಂಸ್ಕೃತಿ ಏನೆಂಬುದು ರಾಜ್ಯದ ಜನತೆಗೆ ಗೊತ್ತು. ಉಪಚುನಾವಣೆಗೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳಿಲ್ಲದೇ ನಮ್ಮ ಪಕ್ಷದವರನ್ನು ಸೆಳೆಯುತ್ತಿರುವ ಕಾಂಗ್ರೆಸ್ ಒಂದು ರಾಜಕೀಯ ಪಕ್ಷವೇ? ಕಾಂಗ್ರೆಸ್ ಇಂದು ಯಾವ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದೆ? ಯಾರ ಯಾರ ಹೆಗಲ ಮೇಲೆ ಕುಳಿತು ರಾಜಕೀಯ ಮಾಡುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಗುಡುಗಿದರು.

Related Articles

Back to top button