Uncategorized

*ಕರ್ನಾಟಕದಲ್ಲಿ ಯಾವ ಅಜಿತ್ ಪವಾರ್ ಹುಟ್ಟು ಹಾಕ್ತಾರೋ…ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಗೃಹಕಚೇರಿಯಲ್ಲಿಯೇ ಭ್ರಷ್ಟಾಚಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಆಡಳಿತದ ಬಗ್ಗೆ ವಾಕ್ಪ್ರಹಾರ ಮುಂದುವರೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ಅತ್ತ ಮಹಾರಾಷ್ಟ್ರದಲ್ಲಿ ದಿಢೀರ್ ರಾಜಕೀಯ ಬದಲಾವಣೆಯಾಗಿದೆ. ಇಲ್ಲಿ ಯಾವಾಗ ಏನಾಗುತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಿನ್ನೆ ಅಜಿತ್ ಪವಾರ್ ಮಹಾರಾಷ್ಟ್ರ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಯಾವ ಅಜಿತ್ ಪವಾರ್ ಹುಟ್ಟುಹಾಕ್ತಾರೋ… ಕರ್ನಾಟಕದ ಬಗ್ಗೆಯೂ ನನಗೆ ಆತಂಕ ಶುರುವಾಗಿದೆ ಎಂದು ಲೇವಡಿ ಮಾಡಿದ್ದಾರೆ.

Home add -Advt

Related Articles

Back to top button