
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದ್ದು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಜೆಡಿಎಸ್ ಪುಟಗೋಸಿ ಪಕ್ಷ ಎಂದು ಕರೆದಿದ್ದ ಕಾಂಗ್ರೆಸ್ ಮಾಜಿ ಸಚಿವ ನಾರಾಯಣಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವಿಧಾನಸಭಾ ಚುನಾವಣಾ ಫಲಿತಾಂಶ ಬರಲಿ ಯಾರದ್ದು ಪುಟಗೋಸಿ ಪಕ್ಷ ಎಂಬುದು ಗೊತ್ತಾಗುತ್ತದೆ ಎಂದು ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ನವರು ಮೊದಲು ಅವರ ಪಕ್ಷದ ಪುಟಗೋಸಿ ಸರಿಪಡಿಸಿಕೊಳ್ಳಲಿ. ನಂತರ ಜೆಡಿಎಸ್ ಬಗ್ಗೆ ಮಾತನಾಡಲಿ. ವಿಪಕ್ಷ ಸ್ಥಾನದ ನಾಯಕನಿಗೆ ಕ್ಷೇತ್ರ ಹುಡುಕಿಕೊಡಲು ಇವರಿಗೆ ಸಾಧ್ಯವಾಗಿಲ್ಲ. ಕಾಂಗ್ರೆಸ್ ನಾಯಕರ ಹೇಳಿಕೆಗೆ ಜನರೇ ತಕ್ಕ ಉತ್ತರ ಕೊಡ್ತಾರೆ ಎಂದು ಹೇಳಿದ್ದಾರೆ.
ಶಾಲಾ ಕಟ್ಟಡ ಉದ್ಘಾಟನೆ ವೇಳೆ ನಡೆದಿದ್ದ ಜೆಡಿಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಜಟಾಪಟಿ ವೇಳೆ ಮಾಜಿ ಸಚಿವ ನಾರಾಯಣಸ್ವಾಮಿ ಪುಟಗೋಸಿ ಪ್ರಾದೇಶಿಕ ಪಕ್ಷ ಜೆಡಿಎಸ್ ಇಷ್ಟು ಆಟವಾಡಬೇಕಾದರೆ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ನವರಾದ ನಾವು ಎಷ್ಟು ಅಟವಾಡಬೇಕು ಎಂದು ವಾಗ್ದಾಳಿ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ