
ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ.. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು.
ತನಿಖೆಯ ಮೂಲಕ ಎಲ್ಲಾ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ