Kannada NewsKarnataka NewsLatestPolitics

*ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ; ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Home add -Advt

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಜೆಡಿಎಸ್ ನಿಂದ ಉಚ್ಛಾಟಿಸಲಾಗಿದೆ. ಯಾರು ಎಲ್ಲಿಗೆ ಹೋಗ್ತಾರೆ ಎಂದು ಕಾಯಲು ಆಗುತಾ? ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಆರೋಪ ಕೇಳಿಬಂದ ಕಾರಣಕ್ಕೆ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದರು.

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್ ಗೂ ಬಿಜೆಪಿ, ಎನ್ ಡಿಎ ಗೂ ಸಂಬಂಧವಿಲ್ಲ. ಕುಮಾರಸ್ವಾಮಿಗೂ ಸಂಬಂಧವಿಲ್ಲ. ಈ ವಿಚಾರದಲ್ಲಿ ನನ್ನ ಹಾಗೂ ನನ್ನ ತಂದೆ ಬಗ್ಗೆ ಸಂಶಯಪಡಬೇಡಿ. ಸರ್ಕಾರ ಎಸ್ ಐಟಿ ರಚಿಸಿದೆ ಪ್ರಕರಣದ ತನಿಖೆ ನಡೆಯುತ್ತಿದೆ. ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದರು.


Related Articles

Back to top button