Politics

*ಬೆಲೆ ಏರಿಕೆಗೆ ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆಲೆ ಏರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು ಎಂದು ಗುಡುಗಿದ್ದಾರೆ.

ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ!!

ನೆಪ: ಪಂಚ ಗ್ಯಾರೆಂಟಿ! ದುರುದ್ದೇಶ: ಜನರ ಲೂಟಿ!! ಮಹಮ್ಮದ್ ಘಜ್ನಿ, ಮಹಮ್ಮ ದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ!!

ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ!

Home add -Advt

ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ ದರಬೀಜಾಸುರ ಕಾಂಗ್ರೆಸ್ ಸರಕಾರ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಇಂದಿನಿಂದ (ಏಪ್ರಿಲ್ 1ರಿಂದ) ಕಸದ ಸೆಸ್ ಹೇರುತ್ತಿದೆ ದರಬೀಜಾಸುರ ಸರಕಾರ!! ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Related Articles

Back to top button