Latest

*ಅಂತವರ ಬಾಯಲ್ಲಿ ಈ ಮಾತು ಯಾಕೆ ಬಂತು ಗೊತ್ತಿಲ್ಲ; ಸಿದ್ದರಾಮಯ್ಯಗೆ ಟಾಂಗ್ ನೀಡಿದ ಹೆಚ್.ಡಿ.ಕೆ*

ಕನ್ನಡ ನಾಡಿಗೆ ಅಮಿತ್ ಶಾ ಹಾಗೂ ಪ್ರಿಯಾಂಕಾ ಗಾಂಧಿ ಕೊಡುಗೆ ಏನು?

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮುಖ್ಯಮಂತ್ರಿ ಹುದ್ದೆ ಜಾತಿಗೆ ಸೀಮಿತ ಮಾಡಬೇಡಿ. ಮುಖ್ಯಮಂತ್ರಿಯಾದವರು ನಾಡಿನ ಹಿತದೃಷ್ಟಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮುಸ್ಲಿಂ ಮುಖ್ಯಮಮಂತ್ರಿ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ. ಮುಖ್ಯಮಂತ್ರಿ ಹುದ್ದೆಯನ್ನು ಯಾವುದೇ ಜಾತಿಗೆ ಸೀಮಿತ ಮಾಡಬಾರದು. ಅವರು ನಾಡಿನ ಹಿತದೃಷ್ಟಿ ಇಟ್ಟುಕೊಂಡು ಕೆಲಸ ಮಾಡಬೇಬೇಕಾದವರು ಎಂದರು.

ಮುಸ್ಲಿಂ ಸಮುದಾಯದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ. ಮಾಜಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಒಬ್ಬ ಅನುಭವಿ ರಾಜಕಾರಣಿ. ಅಂತವರ ಬಾಯಲ್ಲಿ ಈ ಮಾತು ಯಾಕೆ ಬಂತೋ ಗೊತ್ತಿಲ್ಲ. ಯಾವ ಅರ್ಥದಲ್ಲಿ ಅವರು ಹಾಗೇ ಹೇಳಿದ್ದರೋ ಗೊತ್ತಿಲ್ಲ. ಬಹುಶ: ಕಾಂಗ್ರೆಸ್ ಮುಗಿಸಲು ಹೀಗೆ ಹೇಳಿರಬೇಕು ಎಂದು ಹೇಳಿದರು.

ಇನ್ನು ಬಿಜೆಪಿ ಅಭ್ಯರ್ಥಿಗಳ ಪರ ಅಮಿತ್ ಶಾ ಹಾಗೂ ಕಾಂಗ್ರೆಸ್ ಪರ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಹಾಗೂ ಪ್ರಿಯಾಂಕಾ ಗಾಂಧಿ ಆಟ ರಾಜ್ಯದಲ್ಲಿ ನಡೆಯಲ್ಲ. ಕನ್ನಡ ನಾಡಿಗೆ ಅವರ ಕೊಡುಗೆ ಏನೂ ಇಲ್ಲ. ಅಮಿತ್ ಶಾಗೆ ರಾಜ್ಯದಲ್ಲಿ ಜನ ಬೆಂಬಲ ವ್ಯಕ್ತವಾಗುತ್ತಿಲ್ಲ. ರ್ಯಾಲಿಗೆ ಜನರೇ ಇಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಜನ ಬೆಂಬಲವನ್ನು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.

ಜೆಡಿಎಸ್ ಯಾರೊಂದಿಗೂ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಈ ಬಾರಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ತಿಳಿಸಿದರು.

https://pragati.taskdun.com/supreme-courtadjournmay-9th2b-reservation-canncelkarnataka-govt/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button