Politics

*ರಾಜೀನಾಮೆ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Home add -Advt

ಮಾಜಿ ಸಿಎಂ ಕುಮಾರಸ್ವಾಮಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟನ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಂಸದರಾಗಿ ಆಯ್ಕೆಯಾಗಿರುವ ಕುಮಾರಸ್ವಾಮಿ ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದು ನೇರವಾಗಿ ಬೆಂಗಳೂರಿಗೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ, ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥನಕ್ಕೆ ರಾಜೀನಾಮೆ ಸಲ್ಲಿಸಿದರು.

ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚೆನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

Related Articles

Back to top button