ಪ್ರಗತಿವಾಹಿನಿ ಸುದ್ದಿ; ರಾಮನಗರ: ಆರ್.ಎಸ್.ಎಸ್ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎ ಹೆಚ್.ಡಿ.ಕುಮಾರಸ್ವಾಮಿ, ಎಲ್ಲಾ ವಿಶ್ವ ವಿದ್ಯಾನಿಲಯಗಳಲ್ಲಿ ಆರ್.ಎಸ್.ಎಸ್ ಕಾರ್ಯಕರ್ತರನ್ನೇ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, 40 ವರ್ಷಗಳ ಹಿಂದೆ ಇದ್ದ ಆರ್.ಎಸ್.ಎಸ್ ಬೇರೆ, ಈಗಿರುವ ಆರ್.ಎಸ್.ಎಸ್ ಬೇರೆ. ಈಗಿನ ಕಾರ್ಯಕರ್ತರು ಲಕ್ಷ ಲಕ್ಷ ಲೂಟಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಈಗಿನ ಬಿಜೆಪಿ ಸರ್ಕಾರ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ಆರ್.ಎಸ್.ಎಸ್ ಕಾರ್ಯಕರ್ತರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿದೆ. ಅವರು ಕೆಲಸಕ್ಕಾಗಿ 1-2 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ನಡೆ ವೀರಾಪುರದ ಕಡೆ; ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಹಿರೇಮಠ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ