Karnataka NewsLatest

*ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಜಯ್ ಪಾಟೀಲ್ ಗೆ ನೋಟೀಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಮಹಿಳೆಯರ ಘನತೆ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ತರುವ ಹೇಳಿಕೆ ನೀಡಿದ್ದ ಆರೋಪದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಜಯ್ ಪಾಟೀಲ್ ಗೆ ನೋಟಿಸ್ ಜಾರಿ ಮಾಡಿದ್ದು, 7 ದಿನಗಳ ಒಳಗಾಗಿ ಮಹಿಳಾ ಆಯೋಗದ ಮುಂದೆ ಖುದ್ದು ಹಾಜರಾಗಿ ತಮ್ಮ ಹೇಳಿಕೆ ಬಗ್ಗೆ ವಿವರಣೆ ನೀಡಬೇಕು ಎಂದು ತಿಳಿಸಿದೆ.

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ದರು. ಇನ್ನು ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಅವಮಾನಿಸಿದ್ದರು.

Home add -Advt


Related Articles

Back to top button