Latest

ನನ್ನ ಹೆಸರು ಕೆದಕಲಿಲ್ಲ ಅಂದ್ರೆ ನಿದ್ದೆ ಬರಲ್ಲ; ಸಿದರಾಮಯ್ಯಗೆ ಹೆಚ್.ಡಿ.ಕೆ ತಿರುಗೇಟು

ಪ್ರಗತಿವಾಹಿನಿ ಸುದ್ದಿ; ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಜಾತಿ ಗಣತಿ ವರದಿ ಕುರಿತ ವಾಕ್ಸಮರ ತಾರಕ್ಕೇರಿದ್ದು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.

ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಜಾತಿ ಗಣತಿ ಸಮೀಕ್ಷೆ ಸಿದ್ಧವಿರಲಿಲ್ಲ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸಿದ್ಧವಿತ್ತು. ಅಂದು ಪುಟ್ಟರಂಗಶಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದರು. ಜಾತಿ ಗಣತಿ ವರದಿ ರೆಡಿಯಿರುವುದಾಗಿ ಸಚಿವರು ಹೇಳಿದ್ದರು. ಆದರೆ ಬಿಡುಗಡೆಗೆ ಕುಮಾರಸ್ವಾಮಿ ಬೆದರಿಕೆಯೊಡ್ಡಿದ್ದರು. ಹೆಚ್.ಡಿ.ಕೆ ಮೇಲಿನ ಹೆದರಿಕೆಯಿಂದ ಅಂದು ಸಮೀಕ್ಷೆ ಬಿಡುಗಡೆ ಮಾಡಲಿಲ್ಲ. ಆದರೆ ಕುಮಾರಸ್ವಾಮಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನಿನ್ನೆ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.

ಇದೀಗ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ಸುಳ್ಳು ಹೇಳುವುದಕ್ಕೂ ಇತಿಮಿತಿ ಇರಬೇಕು. ಸಿದ್ದರಾಮಯ್ಯ ಪ್ರಚಾರಕ್ಕಾಗಿ ಜಾತಿ ಗಣತಿ ಹೇಳಿಕೆ ನೀಡುತ್ತಾ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅಷ್ಟಿದ್ದರೆ ಜಾತಿ ಗಣತಿ ವಿಚಾರವನ್ನು ಸದನದಲ್ಲಿ ಪ್ರಸ್ತಾಪ ಮಾಡಬೇಕಿತ್ತು. ಹತ್ತು ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಒಮ್ಮೆಯೂ ಯಾಕೆ ಈ ವಿಚಾರ ಪ್ರಸ್ತಾಪ ಮಾಡಲಿಲ್ಲ? ಸದನದಲ್ಲಿ ವಿಚಾರ ಪ್ರಸ್ತಾಪಿಸಿ ಚರ್ಚೆ ನಡೆಸಬೇಕಿತ್ತು. ಅದನ್ನು ಬಿಟ್ಟು ಬೀದಿಯಲ್ಲಿ ಹೇಳಿಕೆಗಳನ್ನು ನೀಡುತ್ತಾ ತಿರುಗಾಡುತ್ತಿರುವುದೇಕೆ? ಎಂದು ಕಿಡಿಕಾರಿದರು.

ಸದನದಲ್ಲಿ ನಿಯಮ 69ರಡಿ ಚರ್ಚೆ ಮಾಡಿ, ರಾಜ್ಯದ ಜನತೆಗೆ ಸತ್ಯಾಂಶ ತೆರೆದಿಡಬಹುದಿತ್ತು. ಆದರೆ ಸದನದಲ್ಲಿ ಮಾತನಾಡದೇ ಸದನದ ಹೊರಗೆ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿರುವುದು ಅವರ ಇಬ್ಬಗೆಯ ನೀತಿ ತೋರಿಸುತ್ತದೆ. ಅವರ ಪ್ರಚಾರಕ್ಕೆ ಈ ವಿಚಾರ ಬಳಸಿಕೊಂಡು, ಅನಗತ್ಯವಾಗಿ ನನ್ನ ಹೆಸರನ್ನು ಕೆದಕುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರತಿದಿನ ನನ್ನ ಹೆಸರು ಕೆದಕದಿದ್ದರೆ ನಿದ್ದೆ ಬರಲ್ಲ ಅನಿಸುತ್ತಿದೆ ಎಂದು ತಿರುಗೇಟು ನೀಡಿದರು.
ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ; ರೈತರ ಹಿತಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ ಎಂದ ಜೆಡಿಎಸ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button