
ಪ್ರಗತಿವಾಹಿನಿ ಸುದ್ದಿ; ಕೋಲಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಹಣ ಪಡೆದಿದ್ದು, ಸಿದ್ದರಾಮಯ್ಯ ಹೊರತು ನಾವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಚುನಾವಣೆಗಳಲ್ಲಿ ನಾನು ಯಾರ ಜೊತೆಯೂ ರಾಜಿ ಮಾಡಿಕೊಂಡಿಲ್ಲ. ಬಿಜೆಪಿ ದುರಾಡಳಿತದಲ್ಲಿ ಕಾಂಗ್ರೆಸ್ ನವರದ್ದೂ ಸಮಪಾಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಶ್ಚಂದ್ರರೇ? ಬೆಂಗಳೂರಿನಲ್ಲಿ 450 ಎಕರೆ ರೀಡು ಮಾಡಿ ಕೆಂಪಣ್ಣ ಆಯೋಗ ಜಾರಿಗೆ ತಂದು 400-500 ಕೋಟಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ 2008ರಲ್ಲಿ ಆಪರೇಷನ್ ಕಮಲದ ವೇಳೆ ಯಡಿಯೂರಪ್ಪನವರಿಂದಲೇ ಹಣ ಪಡೆದಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರ ಆಪ್ತರೇ ಮಾಹಿತಿ ನೀಡಿದ್ದಾರೆ. ಬಿಜೆಪಿ ಗೆಲ್ಲಿಸಲು ಹಣ ಪಡೆದದ್ದು ಅವರೇ. ಯಾವ ಸಮಯದಲ್ಲಿ ಕತ್ತು ಕೊಯ್ಯಬೇಕು ಎನ್ನುವುದು ಸಿದ್ದರಾಮಯ್ಯ ಅವರ ಜಾಯಮಾನ. ಇಂತವರಿಂದ ನಾನು ಕಲಿಯಬೇಕಾಗಿಲ್ಲ. ನನ್ನ ಬಗ್ಗೆ ಮಾತನಾಡುವ ಮೊದಲು ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದಾರೆ.
20 ಜಿಲ್ಲೆಗಳ ಜೊತೆ ನಾಳೆ ಸಿಎಂ ಯಡಿಯೂರಪ್ಪ ವಿಡೀಯೋ ಸಂವಾದ
ದ್ವಿತೀಯ ಪಿಯು ಫಲಿತಾಂಶದಲ್ಲಿ ಮತ್ತೆ ಬದಲಾವಣೆ…!