Latest

ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಸ್ಪಂದಿಸಿ; ಹೆಚ್.ಡಿ.ಕೆ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ಆಗ್ರಹಿಸಿರುವ ಕುಮಾರಸ್ವಾಮಿ, ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು ಎಂದಿದ್ದಾರೆ.

ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟುಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಹೇಳಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button