
ಪ್ರಗತಿವಾಹಿನಿ ಸುದ್ದಿ: ಸಂಕ್ರಾಂತಿ ಹಬ್ಬದ ದಿನದಂದೇ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ರಾಜಕೀಯದಿಂದ ನಾನು ದೂರ ಸರಿಯುವುದಿಲ್ಲ. ನಾನು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನಿಸುವುಸು ರಾಜ್ಯದ ಜನತೆ. ನಾನು ಯಾವತ್ತೂ ರಾಜ್ಯ ರಾಜಕಾರಣದಿಂದ ದೂರ ಸರಿಯುವುದಿಲ್ಲ ಎಂದಿದ್ದಾರೆ.
ನಾವು ಮೈತ್ರಿ ಒಪ್ಪಂದ ಮಾಡಿಕೊಂಡಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. ನಮ್ಮ ಉದ್ದೇಶ ರಾಜ್ಯದಲ್ಲಿ ಒಳ್ಳೆಯ ಸರ್ಕಾರ ತರಬೇಕು ಎಂಬುದು.ವೈಯಕ್ತಿಕವಾಗಿ ನನ್ನ ಉದ್ದೇಶವೂ ಇದೆ. ನಾನು ರಾಜ್ಯ ರಾಜಕಾರಣದಿಂದ ದೂರವಾಗಿಲ್ಲ. ರಾಜ್ಯ ರಾಜಕಾರಣದಲ್ಲಿಯೇ ಇದ್ದೇನೆ. ರಾಜ್ಯದಲ್ಲಿ ಆಡಳಿತ ಹೇಗೆ ನಡೆಯುತ್ತಿದೆ ಎಂಬುದನ್ನೂ ಗಮನಿಸುತ್ತಿದ್ದೇನೆ. ಒಳ್ಳೆಯ ಸರ್ಕಾರವನ್ನು ತಂದು ಜನರು ನೆಮ್ಮದಿಯಿಂದ ಇರುವಂತಾಗಬೇಕು ಎಂದರು.




