Latest

ಅಮಿತ್ ಶಾಗೆ ಇಂಗ್ಲಿಷ್ ಬರಲ್ವಾ?; ಹೆಚ್.ಡಿ.ಕೆ ಪ್ರಶ್ನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ. ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ ಎಂದು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ.
ಚಂದ್ರು ಹತ್ಯೆ ಕೇಸ್ ಪ್ರಕರಣ; ಪೊಲೀಸ್ ಆಯುಕ್ತರಿಂದ ಸುಳ್ಳು ಹೇಳಿಕೆ; ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಗಂಭೀರ ಆರೋಪ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button