Latest

ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಕುಮಾರಸ್ವಾಮಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಿಂದಾಲ್ ಪಂಕನಿಗೆ ಭೂಮಿ ಪರಭಾರೆ ರದ್ದು ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ.

Home add -Advt

ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ ಎಂದಿದ್ದಾರೆ.

ಗ್ಯಾಂಗ್ ರೇಪ್ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್

Related Articles

Back to top button