Latest

ಭಗತ್ ಸಿಂಗ್ ಪಾಠಕ್ಕೆ ಕೊಕ್ ಕೊಟ್ಟು ಆರ್ ಎಸ್ ಎಸ್ ನ ಹೆಡ್ಗೆವಾರ್ ಸೇರ್ಪಡೆ; ಪಠ್ಯಪುಸ್ತಕವನ್ನು ಪಕ್ಷ ಪುಸ್ತಕ ಮಾಡಲು ಹೊರಟ ಬಿಜೆಪಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಠ್ಯಪುಸ್ತಕದಲ್ಲಿ ಆರ್.ಎಸ್.ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರಿಸಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿರುವುದು ಎಂದು ಗುಡುಗಿದ್ದಾರೆ.

ಮಹಾನ್‌ ರಾಷ್ಟ್ರಪ್ರೇಮಿ, ಬ್ರಿಟೀಷರಿಗೆ ಸಿಂಹಸ್ವಪ್ನ, ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್‌ ಭಗತ್‌ ಸಿಂಗ್‌ ಅವರ ಪಠ್ಯಕ್ಕೆ ಕೊಕ್‌ ಕೊಟ್ಟು, ಆರ್.ಎಸ್.ಎಸ್ ಸಂಸ್ಥಾಪಕ ಹೆಡಗೇವಾರ್‌ ಕುರಿತ ಮಾಹಿತಿಯನ್ನು ಪಠ್ಯಕ್ಕೆ ತುರುಕುತ್ತಿರುವ ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪರಾಕಾಷ್ಠೆ. ಭಗತ್‌ ಸಿಂಗ್‌ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು, ಭಗತ್‌ ಸಿಂಗ್‌ʼರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ? ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ, ಚಾರಿತ್ರ್ಯಹೀನತೆಯೇ ಮೈವೇತ್ತ ಬಿಜೆಪಿಗೆ ರಾಜ್ಯದ ಬೆಳವಣಿಗೆಯಲ್ಲಿ ನಂಬಿಕೆ ಇಲ್ಲ. ಹಿಜಾಬ್‌, ಆಹಾರ, ವ್ಯಾಪಾರ, ಹಲಾಲ್‌ ಎಲ್ಲಾ ಆಯಿತು. ಈಗ ಪಠ್ಯಕ್ಕೆ ನೇತಾಡುತ್ತಿದೆ. ಅಭಿವೃದ್ಧಿ ಎಂದರೆ ಆ ಪಕ್ಷಕ್ಕೆ ಅಪಥ್ಯ. ಬಿಜೆಪಿಗರು ಮತ್ತು ಬ್ರಿಟೀಷರು ಇಬ್ಬರೂ ಒಂದೇ. ಒಡೆದು ಆಳುವುದೇ ಇವರ ನೀತಿ-ಧರ್ಮ. ಬ್ರಿಟೀಷ್‌ ಪರಂಪರೆಯನ್ನು ಬಿಜೆಪಿಗರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೂ ಮುಂದುವರಿಸಿದ್ದಾರೆ.

ಪಠ್ಯವನ್ನು ವಿಕೃತಿಗೊಳಿಸುತ್ತಿರುವುದು ಎಂದರೆ, ಕನ್ನಡ ಆಸ್ಮಿತೆಯನ್ನು ಹತ್ತಿಕ್ಕುವ ಪಾತಕ ಯತ್ನ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು, ಪ್ರಶ್ನಿಸಬೇಕು “ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!!” ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಕೀಲೆ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button