Kannada NewsKarnataka NewsLatestPolitics

*ಘಟಬಂಧನಕ್ಕೆ ಬಂದ ಹೊರ ರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಐಎಎಸ್ ಅಧಿಕಾರಿಗಳ ಬಳಕೆ; HDK ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕರ ಮಹಾಮೈತ್ರಿ ಕೂಟ ಸಭೆಗೆ ಐಎ ಎಸ್ ಅಧಿಕಾರಿಗಳನ್ನು ಬಳಸಿಕೊಳ್ಳುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕರ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೊಳಗಾದ ಕಾಂಗ್ರೆಸ್ ಪಕ್ಷವು, ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮನಕ್ಕೆ ಘಟಶ್ರಾದ್ಧ ಮಾಡುತ್ತಿದೆ. ಘಟಬಂಧನಕ್ಕೆ ಬಂದ ಹೊರ ರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು. ನುಡುದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ರಾಜ್ಯದಲ್ಲಿ ’ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ರಾಜಕೀಯ ಆಡಳಿತ ವಸಾಹತುಶಾಹಿಯನ್ನು ದೇಶಕ್ಕೆ ಪರಿಚಯಿಸಿದೆ. 135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ಕಾಂಗ್ರೆಸ್ ದರ್ಪ. ಸತ್ಯಯುಗದಲ್ಲಿ ಹಿರಣ್ಯಕಶಿಪುವು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Home add -Advt

Related Articles

Back to top button