Latest

ಹಳೆ ಸಚಿವರಿಂದ ಮತ್ತದೇ ಛಾಳಿ; ಮಂತ್ರಿ ಮಂಡಲದ ವಿರುದ್ಧ ಕೆಂಡ ಕಾರಿದ ಕುಮಾರಸ್ವಾಮಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬದಲಾದರೆ ಸಾಲದು ಮಂತ್ರಿ ಮಂಡಲದಲ್ಲಿನ ಸಚಿವರ ವರ್ತನೆಯೂ ಬದಲಾಗಬೇಕು ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ಮಂತ್ರಿ ಮಂಡಲದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಹೊಸಬರಂತೆ ಪ್ರಮಾಣವಚನ ಸ್ವೀಕರಿಸಿರುವ ಹಳೆ ಸಚಿವರು ಮತ್ತದೇ ಹಳೇ ಚಾಳಿ ಮುಂದುವರೆಸಿದ್ದಾರೆ. ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದಿದ್ದಾರೆ.

ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ವಿಜಯೋತ್ಸವ ಮಾಡಿದ್ದಾರೆ ಎಂದು ಗುಡುಗಿದ್ದಾರೆ.

Home add -Advt

ಜಮೀರ್ ಅಹ್ಮದ್ ಗೆ ಇಡಿಯಿಂದ ನೋಟೀಸ್: ಶುರುವಾಯ್ತಾ ಸಂಕಷ್ಟ?

Related Articles

Back to top button