Politics

*Karma Hits back ಎಂದರೆ ಇದೇ ಅಲ್ಲವೇ? ಸಿಎಂ ಸಿದ್ದರಾಮಯ್ಯಗೆ HDK ಟಾಂಗ್*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯನವರೇ..ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!
ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!! Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು ಎಂದು ಟಾಂಗ್ ನೀಡಿದ್ದಾರೆ.

ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು.. ನಿಮಗೂ ಭಯವಿದೆsss!! ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಎಂದು ಕೇಳಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button