Wanted Tailor2
Cancer Hospital 2
Bottom Add. 3

*ಆಡಿಯೋ ಸಂಭಾಷಣೆಯ ವಿವೇಕಾನಂದನ ಪತ್ತೆ ಮಾಡಿದ ಮಾಜಿ ಸಿಎಂ; ಬರ್ಮುಡಾ ಟ್ರಯಾಂಗಲ್ ರಹಸ್ಯವನ್ನೇ ಮೀರಿಸಿದ ಕಥೆ ಎಂದು ಮತ್ತೆ ಕಿಡಿಕಾರಿದ HDK*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮತ್ತೆ ಮುಂದುವರೆಸಿದ್ದು, ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಭಾಷಣೆಯಲ್ಲಿ ಕೇಳಿಬಂದ ವಿವೇಕಾನಂದ ಯಾರು ಎಂಬುದನ್ನು ಪತ್ತೆ ಮಾಡಿ, ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗಗಳ ಪಟ್ಟಿಯಲ್ಲಿ ಒಳ ನುಸುಳಿದ್ದು ಹೇಗೆ? ಓಹ್! ಒಂದು ಸರ್ಕಾರ ವಿಸ್ಮಯಗಳ ಆಗರ!! ಡೂಪ್ಲಿಕೇಟ್ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್ ಆರ್ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಾಗಾರಿಕೆಗೆ ನೂರೆಂಟು ನಮನ ಎಂದು ವ್ಯಂಗ್ಯವಾಡಿದ್ದಾರೆ.

ವಿಡಿಯೋ ವಿವೇವಾಕನಂದ ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ಬರ್ಮುಡಾ ಟ್ರಯಾಂಗಲ್ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ. ಉತ್ತರ ಹೇಳಲೇಬೇಕು. ಅದು ನಿಮ್ಮ ದುರ್ವಿಧಿ. ಆನ್ಸರ್ ಮಾಡಿ ಸಿದ್ದರಾಮಯ್ಯನವರೇ? ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು? ಹಾಗಾದರೆ 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗದ ಈ ಯಾದಿಯ 4ನೇ ಹೆಸರಲ್ಲೇ ಅಡಗಿದೆಯಲ್ಲಾ ನಿಮ್ಮ ಸುಲಿಗೆ ಪುತ್ರನ ಕೆಚ್ಚು. ಕ್ಷೇತ್ರ ತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.

ಕಾಸಿಗಾಗಿ ಹುದ್ದೆ, ಕಾಂಗ್ರೆಸ್ ಹುಂಡಿ ಎಂಬ ಸಿನಿಮಾವನ್ನೂ ಮಾಡಿ ಕೆಡಿಪಿ ಕಲಿಯೇ ನಾಯಕ, ಟೆಂಪರವರಿ ಸಿಎಂ-ಟಿಸಿಎಂ ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-ಡಿಸಿಎಂ ನಿರ್ದೇಶಕ. ಹೇಗಿದೆ? ಎಂದು ವ್ಯಂಗ್ಯವಾಡಿದ್ದಾರೆ.


Bottom Add3
Bottom Ad 2

You cannot copy content of this page