Latest

*ಉರಿಗೌಡ, ನಂಜೇಗೌಡ ಸಿನಿಮಾ ಮಾಡಲು ಹೊರಟ ಮುನಿರತ್ನ; HDK ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉರಿಗೌಡ, ನಂಜೇಗೌಡ ಹೆಸರಿನ ಸಿನಿಮಾ ಮಾಡಲು ಸಚಿವ ಮುನಿರತ್ನ ಹೊರಟಿದ್ದು, ಈ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಮುನಿರತ್ನ ತಮ್ಮ ವೃಷಭಾದ್ರಿ ಪ್ರೊಡಕ್ಷನ್ ಮೂಲಕ ಉರಿಗೌಡ ನಂಜೇಗೌಡ ಹೆಸರನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೊಂದಾಯಿಸಿ ಸಿನಿಮಾ ಮಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಚಿವ ಮುನಿರತ್ನ ಸಿನಿಮಾ ಸೀರ್ಷಿಕೆ ನೊಂದಾವಣಿಗಾಗಿ ಸಲಿಸಿರುವ ಅರ್ಜಿಯ ಪ್ರತಿಯನ್ನು ಲಗ್ಗತ್ತಿಸಿದ್ದಾರೆ. ಕಲ್ಪಿತ ಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ಬಿಜೆಪಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹಳ್ಳಹಿಡಿಸಬೇಕೆಂಬುದು ಬಿಜೆಪಿ ಹಿಡನ್ ಅಜೆಂಡಾ ಎಂದು ಗುಡುಗಿದ್ದಾರೆ.

Home add -Advt

Related Articles

Back to top button