ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಅಪಹರಣ ಕೇಸ್ ನಲ್ಲಿ ಬಂಧನ ಭೀತಿಯಲ್ಲಿದ್ದ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.
ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ನಲ್ಲಿ ಮಹಿಳೆಯ ಹೆಸರನ್ನೇ ಉಲ್ಲೇಖಿಸಿಲ್ಲ. ಅಲ್ಲದೇ ನಾಳೆ ಬೆಳಿಗ್ಗೆ ರೇವಣ್ಣ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಹಾಗಾಗಿ ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ರೇವಣ್ಣ ಪರ ವಕೀಲರು ವಾದ ಮಂಡಿಸಿದರು. ವಾದ ಆಲಿಸಿದ ಕೋರ್ಟ್ ಎಸ್ ಐಟಿ ಪರ ಎಸ್ ಪಿಪಿಗೆ ನೋಟೀಸ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ