Karnataka NewsLatestPolitics

*ಜಾಮೀನು ನಿರೀಕ್ಷೆಯಲ್ಲಿದ್ದ ಹೆಚ್.ಡಿ.ರೇವಣ್ಣಗೆ ಶಾಕ್; ಬೇಲ್ ಅರ್ಜಿ ವಿಚಾರಣೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಮತ್ತೆ ಶಾಕ್ ಎದುರಾಗಿದೆ. ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿದ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್,ಡಿ.ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ಕೈಗೆತ್ತಿಕೊಂಡ ಕೋರ್ಟ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ.

ರೇವಣ್ಣ ಬೇಲ್ ಅರ್ಜಿಯನ್ನು ಸೋಮವಾರ ಬೆಳಿಗ್ಗೆ 11:30ಕ್ಕೆ ಮೂಂದೂಡಿ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೇವಣ್ಣ ಮತ್ತೆ ಮೂರು ದಿನ ಜೈಲಿನಲ್ಲೇ ಕಾಲಕಳೆಯುವ ಸ್ಥಿತಿ ಎದುರಾಗಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button