ಪ್ರಗತಿವಾಹಿನಿ ಸುದ್ದಿ: ಹೊಳೇನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರೆಸಿ ಕೋರ್ಟ್ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ತಮಗೆ ಜಾಮೀನು ನೀಡುವಂತೆ ಕೋರಿ ಹೆಚ್.ಡಿ.ರೇವಣ್ಣ ಮೇ 16ರಂದು ಬೆಂಗಳೂರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿದ್ದು, ಖುದ್ದು ಕೋರ್ ಗೆ ರೇವಣ್ಣ ಹಾಜರಾಗುವಂತೆ ಸೂಚಿಸಿತ್ತು. ಬಳಿಕ ಇಂದು ಮಧ್ಯಾಹ್ನದವರೆಗೂ ರೇವಣ್ಣಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಇಂದು ಮತ್ತೆ ಅರ್ಜಿ ವಿಚರಣೆ ನಡೆಸಿದ ಕೋರ್ಟ್. ಎಸ್ಐಟಿ ಪರ ವಕೀಲರ ಹಾಗೂ ರೇವಣ್ಣ ಪರ ವಕೀಲರ ವಾದ-ಪ್ರತಿವಾದವನ್ನು ಆಲಿಸಿದ್ದು, ಮೇ 20ಕ್ಕೆ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ ಅಲ್ಲಿಯವರೆಗೂ ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರೆಯಲಿದೆ ಎಂದು ಕೋರ್ಟ್ ಆದೇಶ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ