Kannada NewsLatestPolitics

*ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಶಾಸಕ ರೇವಣ್ಣ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಶಾಸಕ ಹೆಚ್ಡಿ.ರೇವಣ್ಣ, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Home add -Advt

ಬಂಧನ ಭೀತಿಯಲ್ಲಿರುವ ಶಾಸಕ ಹೆಚ್.ಡಿ.ರೇವಣ್ಣ, ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸಿಪುರ ಠಾಣೆಯಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯರು ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಹೆಚ್.ಡಿ.ರೇವಣ್ಣಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿತ್ತು. ಆದರೆ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ.

ಈ ನಡುವೆ ಹೆಚ್.ಡಿ.ರೇವಣ್ಣ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.


Related Articles

Back to top button