Politics

*ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್: ಷರತ್ತುಬದ್ಧ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಹೆಚ್.ಡಿ.ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

5 ಲಕ್ಷ ರೂಪಾಯಿ ಬಾಂಡ್, ಇಬ್ಬರು ಶ್ಯುರಿಟಿ,ಕೋರ್ಟ್ ಸಮ್ಮತಿ ಇಲ್ಲದೇ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ, ಸಾಕ್ಷ್ಯಾಧಾರಗಳನ್ನು ನಾಶ ಮಾಡಬಾರದು ಹಾಗೂ ಎಸ್ ಐಟಿ ತನಿಖೆಗೆ ಸಹಕರಿಸಬೇಕು ಸೇರಿದಂತೆ ಷರತ್ತುಗಳನ್ನು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕಳೆದ ಐದು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಹೆಚ್.ಡಿ.ರೇವಣ್ಣಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.

ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣದಲ್ಲಿ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದ ಹಿನ್ನೆಲೆಯಲ್ಲಿ ರೇವಣ್ಣ ಜೈಲುಪಾಲಾಗಿದ್ದರು.

Related Articles

Back to top button