ಪ್ರಗತಿವಾಹಿನಿ ಸುದ್ದಿ: ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್ ಆಗಿದೆ. ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ಕೋರ್ಟ್ ನಿರಾಕರಿಸಿದೆ.
ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣ ಸಂಬಂಧ ಮಧ್ಯಂತ ಜಾಮೀನು ನೀಡುವಂತೆ ಕೋರಿ ಹೆಚ್.ಡಿ.ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರೇವಣ್ಣ ಪರ ವಕೀಲರು ಹಾಗೂ ಎಸ್ ಐಟಿ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ರೇವಣ್ಣಗೆ ಮಧ್ಯಂತರ ಜಾಮೀನು ನಿರಾಕರಿಸಿದ್ದಾರೆ.
ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ