Politics

*ಶಾಸಕ ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಹೆಚ್.ಡಿ.ರೇವಣ್ಣಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಇದೀಗ ರೇವಣ್ಣಗೆ ನೋಟಿಸ್ ಜಾರಿ ಮಾಡಿದ್ದು, ಕೋರ್ಟ್ ಗೆ ಹಜರಾಗುವಂತೆ ಸೂಚಿಸಿದೆ.

ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆ ಪಿಎಸ್ಐ ಅಜಯ್, ಹರದನಹಳ್ಳಿ ಮನೆಯಲ್ಲಿ ರೇವಣ್ಣಗೆ ಹೈಕೋರ್ಟ್ ನೋಟಿಸ್ ತಲುಪಿಸಿದ್ದಾರೆ. ನೋಟಿಸ್ ತಲುಪಿದ 5 ದಿನಗಳಲ್ಲಿ ಕೋರ್ಟ್ ಗೆ ಹಾಜರಾಗುವಂತೆ ತಿಳಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button