Karnataka NewsLatest

*ಹಣ್ಣು ಕೊಡುವ ನೆಪದಲ್ಲಿ ಮಹಿಳೆಗೆ ಶಾಸಕ ರೇವಣ್ಣ ಕಿರುಕುಳ; ಪುತ್ರ ಪ್ರಜ್ವಲ್ ನಿಂದ ಅತ್ಯಾಚಾರ: ಚಾರ್ಜ್ ಶೀಟ್ ನಲ್ಲಿ ಬಯಲಾಯ್ತು ಅಪ್ಪ-ಮಗನ ಕರಾಳ ಮುಖ*

ಮನೆ ಕೆಲಸದ ಮಹಿಳೆಗೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಪುತ್ರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ.

ಎಸ್ ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ 2144 ಪುಟಗಳ ಚಾರ್ಜ್ ಶೀಟ್ ನಲ್ಲಿ ಈ ಅಂಶ ಉಲ್ಲೇಖ ಮಾಡಿದ್ದಾರೆ.

ಸಂತ್ರಸ್ತೆ 2019ರಿಂದ 2022ರವರೆಗೆ ರೇವಣ್ಣ ಮನೆ ಕೆಲಸಕ್ಕೆ ನಿಯೋಜನೆಗೊಂಡಿದ್ದರು. ಹೆಚ್.ಡಿ.ರೇವಣ್ಣ, ಪತ್ನಿ ಭವಾನಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಹಣ್ಣು ಕೊಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು.

ಪ್ರಜ್ವಲ್ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಮನೆಗೆಲಸದ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ್ದಾರೆ. ಅಲ್ಲದೇ ಆಗಾಗ ಫೋನ್ ಕರೆ ಮಾಡಿ ಕೂಡ ಲೈಂಗಿಕ ಕಿರುಕುಳ ನೀಡಿತ್ತಿದ್ದರು. ಅಷ್ಟೇ ಅಲ್ಲ. ಬೆಂಗಳೂರಿನ ಬಸವನಗುಡಿ ನಿವಾಸದಲ್ಲಿ ಪ್ರಜ್ವಲ್ ರೇವಣ್ಣ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರ ಮಾಡುತ್ತಲೇ ತಮ್ಮ ಮೊಬೈಲ್ ನಿಂದ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನಿನ್ನ ಪತಿಯನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೇ ಮಗಳಿಗೂ ಅದೇ ಗತಿ ಮಾಡುತ್ತೇನೆ ಎಂದು ಬೆದರಿಸಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

Home add -Advt

ಎಲ್ಲಾ ವಿಷಯ ಬಹಿರಂಗವಾಗುತ್ತಿದ್ದಂತೆ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಹಾಗೂ ಸಾಕ್ಷ್ಯ ನಾಶ ಮಾಡುವ ಉದ್ದೇಶಕ್ಕೆ ಪ್ರಜ್ವಲ್ ವಿದೇಶಕ್ಕೆ ಪಲಾಯನವಾಗಿದ್ದರು ಎಂಬುದು ತನಿಖೆಯಲ್ಲಿ ದೃಢವಾಗಿದೆ ಎಂದು ಉಲ್ಲೇಖಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button