Politics

*ಸೆಂಟ್ರಲ್ ಜೈಲಿನಿಂದ ನೇರವಾಗಿ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಆಗಮಿಸಿದ ಹೆಚ್.ಡಿ.ರೇವಣ್ಣ*

ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಜೈಲಿನಿಂದ ಬಿಡುಗದೆಯಾಗುತ್ತಿದ್ದಂತೆ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ನೇರವಾಗಿ ಪದ್ಮನಾಭನಗರದಲ್ಲಿರುವ ಮಜೈ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ ಹೆಚ್.ಡಿ.ರೇವಣ್ಣ, ತಂದೆ ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರ ಆಶಿರ್ವಾದ ಪಡೆದರು. ಈ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.

ಈ ವೇಳೆ ಹೆಚ್.ಡಿ.ರೇವಣ್ಣ ಕುಟುಂಬ, ರೇವಣ್ಣನನ್ನು ಕಂಡು ಭಾವುಕವಾದ ಘಟನೆ ನಡೆದಿದೆ.

ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ, ಮೇ 4ರಂದು ಹೆಚ್.ಡಿ.ದೇವೇಗೌಡರ ನಿವಾಸದಲ್ಲಿದ್ದಾಗಲೇ ಬಂಧಿಸಲ್ಪಟ್ಟಿದ್ದರು.


Related Articles

Back to top button