
ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಹೆಚ್,ಡಿ.ರೇವಣ್ಣ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಜೈಲಿನ ಮುಂಭಾಗದಲ್ಲಿ ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿ ಕಾರ್ಯಕರ್ತರನ್ನು ಚದುರಿಸಿದ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ