Politics

*ಮತ್ತೊಂದು ಪ್ರಕರಣದಲ್ಲಿಯೂ ಹೆಚ್.ಡಿ.ರೇವಣ್ಣ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿದ್ದ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಇದೋಗ ಮತ್ತೊಂದು ಕೇಸ್ ನಲ್ಲಿಯೂ ರುಲೀಫ್ ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನ್ಯಾಯಾಲಯ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಹೆಚ್.ಡಿ.ರೇವಣ್ಣ ಇಂದು ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ರೇವಣ್ಣಗೆ ಖುದ್ದು ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ರೇವಣ್ಣ ಕೋರ್ಟ್ ಗೆ ಖುದ್ದು ಹಾಜರಾಗಿದ್ದರು. ಈ ವೇಳೆ ಕೋರ್ಟ್, ರೇವಣ್ಣಗೆ ನಾಳೆ ಮಧ್ಯಾಹ್ನದವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಾಳೆ ಮಧ್ಯಾಹ್ನ ಮತ್ತೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಕೋರ್ಟ್, ಇಬ್ಬರು ಶ್ಯೂರಿಟಿ ಹಾಗೂ 5 ಲಕ್ಷ ಬಾಂಡ್ ನೀಡುವಂತೆ ಷರತ್ತುಗಳನ್ನು ವಿಧಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button