Latest

*ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ; ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದ SIT*

ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಕೇಸ್ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ರದ್ದು ಮಾಡುವಂತೆ ಎಸ್ ಐಟಿ ಕೋರ್ಟ್ ಮೊರೆ ಹೋಗಿದೆ.

Home add -Advt

ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣಗೆ ಜಮೀನು ನೀಡಿರುವುದು ಸರಿಯಲ್ಲ. ಹೀಗಾಗಿ ರೇವಣ್ಣ ಜಾಮೀನು ರದ್ದುಗೊಳಿಸುವಂತೆ ಎಸ್ ಐಟಿ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರೇವಣ್ಣಗೆ ಮತ್ತೆ ಭೀತಿ ಎದುರಾಗಿದೆ.

ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿರುವ ಎಸ್ ಐಟಿ, ವೈದ್ಯಕೀಯ ಪರೀಕ್ಷೆ ಬಳಿಕ ಕೋರ್ಟ್ ಗೆ ಹಾಜರುಪಡಿಸಲಿದೆ. ಇನ್ನೊಂದೆಡೆ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕೂಡ ಇಂದು ಹೊರಬೀಳಲಿದೆ. ಒಟ್ಟಾರೆ ರೆವಣ್ಣ ಕುಟುಂಬಕ್ಕೆ ಇಂದು ಮಹತ್ವದ ದಿನವಾಗಿದೆ.

Related Articles

Back to top button