ಪ್ರಗತಿವಾಹಿನಿ ಸುದ್ದಿ: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗಿದೆ.
ಕೋರಮಂಗಲದ ಎನ್ ಜಿವಿಯಲ್ಲಿರುವ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ನಿವಾಸದಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಜಡ್ಜ್ ರವೀಂದ್ರಕುಮಾರ್ ಕಟ್ಟಿಮನಿ ಮುಂದೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ.
ಪ್ರಕರಣದ ಬಗ್ಗೆ 15 ಅಂಶಗಳನ್ನು ಉಲ್ಲೇಖಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಎಸ್ ಐಟಿ ಮನವಿ ಮಾಡಿದೆ. ಆದರೆ ರೇವಣ್ಣ ಪರ ವಕೀಲರು ಎಸ್ ಐಟಿ ಕಸ್ಟಡಿಗೆ ನೀಡದಂತೆ ವಾದ ಮಂಡಿಸಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷನಾ ಜಾಮೀನು ಅರ್ಜಿ ವಜಾಗೊಂದ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನಿವಾಸದಿಂದ ಮೇ 4ರಂದು ಸಂಜೆ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ