ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನ ಕೋರಮಂಗಲದ ಎನ್ ಜಿವಿಯಲ್ಲಿರುವ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ನಿವಾಸದಲ್ಲಿ ರೇವಣ್ಣ ಅವರನ್ನು ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರ ಮುಂದೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದರು.
ಈ ವೇಳೆ ಪ್ರಕರಣದ ಬಗ್ಗೆ 15 ಅಂಶಗಳನ್ನು ಉಲ್ಲೇಖಿಸಿ ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ ಐಟಿ ಅಧಿಕಾರಿಗಳು ಮನವಿ ಮಾಡಿದರು. ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರನಿಗೆ ಆರೋಗ್ಯ ಸಮಸ್ಯೆಗಳೂ ಇರುವುದರಿಂದ ಎಸ್ ಐಟಿ ಕಸ್ಟಡಿಗೆ ನೀಡದಂತೆ ವಾದ ಮಂಡಿಸಿದ್ದಾರೆ.
ಈ ವೇಳೆ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ, ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಮೇ 8ರವರೆಗೆ ಎಸ್ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ