ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಎ 1 ಆರೋಪಿಯಾಗಿರುವ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿದ್ದು, ರೇವಣ್ಣ ವಿರುದ್ಧ ಮಹಿಳೆ ಅಪಹರಣ ಕೇಸ್ ದಾಖಲಾಗಿದೆ.
ರೇವಣ್ಣ ಅವರ ಹೊಳೆನರಸಿಪುರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೈಸೂರು ಮೂಲದ ಮಹಿಳೆ ರೇವಣ್ನ ವಿರುದ್ಧ ದೂರು ನೀಡಿದ್ದರು. ಇದೀಗ ಮಹಿಳೆ ನಾಪತ್ತೆಯಾಗಿದ್ದು, ತನ್ನ ತಾಯಿ ಕಾಣೆಯಾಗಿದ್ದಾಳೆ ಹುಡುಕಿಕೊಡಿ ಎಂದು ಮಹಿಳೆಯ ಮಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಚುನಾವಣೆಯ ಸಂದರ್ಭದಲ್ಲಿ ಸತೀಶ್ ಬಾಬು ಎಂಬುವವರು ತನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದರು. ರೇವಣ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ರೇವಣ್ಣ ಹಾಗೂ ಸತೀಶ್ ಬಾಬು ತನ್ನ ತಾಯಿಯನ್ನು ಅಡಗಿಸಿಟ್ಟಿದ್ದಾರೆ. ಹುಡುಕಿ ಕೊಡಿ ಎಂದು ಮಗ ದೂರು ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ಹೆಚ್.ಡಿ.ರೇವಣ್ಣ ಹಾಗೂ ಸತೀಶ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ