*ಉಪಚುನಾವಣೆಯಲ್ಲಿ ವಕ್ಫ್ ಹೆಸರಲ್ಲಿ ಬಿಜೆಪಿ ಸುಳ್ಳು ಪ್ರಚಾರ: ಜನ ಸೊಪ್ಪು ಹಾಕಲ್ಲ ಎಂದು ಸಚಿವ ಹೆಚ್.ಕೆ.ಪಾಟೀಲ್*
ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ
ಪ್ರಗತಿವಾಹಿನಿ ಸುದ್ದಿ: ಕೇಂದ್ರದ ಜೆಪಿಸಿ ಸಮಿತಿ ರಾಜ್ಯಕ್ಕೆ ಆಗಮಿಸಿರುವ ವಿಚಾರವಾಗಿ ಕಿಡಿಕಾರಿರುವ ಕಾನೂನು ಸಂಸದೀಯ, ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್, ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ವಕ್ಫ್ ವಿವಾದದ ನಾಟಕ ಮಾಡುತ್ತಿದ್ದಾರೆ. ಇದರ ಮುಂದುವರೆದ ಭಾಗವಾಗಿ ಈಗ ವಕ್ಫ್ ಬೋರ್ಡ್ ಆಸ್ತಿ ತನಿಖೆಗಾಗಿ ಕೇಂದ್ರದ ಜೆಪಿಸಿ ತಂಡ ಆಗಮಿಸಿದೆ ಎಂದಿದ್ದಾರೆ.
ಕೆಎಲ್ಇ ಜೀರಿಗೆ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ತನಿಖಾ ಸಂಸ್ಥೆಯನ್ನು ದುರುಪಯೋಗ ಪಡೆಸಿಕೊಂಡರು. ಈಗ ಜೆಪಿಸಿ ಸಮಿತಿಯನ್ನು ದುರುಪಯೋಗ ಪಡೆಸಿಕೊಳ್ಳುತ್ತಿತ್ತಿದ್ದಾರೆ. ಇದು ಯಾವ ನೀತಿ ಎಂಬುದನ್ನು ಪ್ರಧಾನಿ ಮೋದಿ ಉತ್ತರಿಸಬೇಕು ಎಂದರು.
ಜೆಪಿಸಿ ದುರುಪಯೋಗ ಪಡಿಸಿಕೊಳ್ಳುವ ಬದಲು ರಾಜ್ಯ ಸರಕಾರಕ್ಕೆ ಪತ್ರ ಬರೆದು ಮಾಹಿತಿ ಕೇಳಬಹದಿತ್ತು. ಜೆಪಿಸಿಯನ್ನು ಅನಧಿಕೃತವಾಗಿ ಬಳಕೆ ಮಾಡಿಕೊಂಡಿದ್ದು ದುರ್ದೈವದ ಸಂಗತಿ ಎಂದು ಹೇಳಿದರು.
ರಾಜ್ಯದಲ್ಲಿ ಶಿಗ್ಗಾವಿ, ಸಂಡೂರು, ಚನ್ನಪಟ್ಟಣದ ವಿಧಾನಸಭಾ ಮತಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿವೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಲೆ ಇದೆ. ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲುವಿನ ನಗೆ ಬಿರಲಿದ್ದಾರೆ ಎನ್ನುವ ವಿಶ್ವಾಸ ಹೊಂದಿದ್ದಾರೆ. ನಮ್ಮ ಪಕ್ಷ ಮೂರು ಸ್ಥಳದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಪಚುನಾವಣೆಯಲ್ಲಿ ಬಿಜೆಪಿಯವರು ವಕ್ಫ್ ಹೆಸರಿನಲ್ಲಿ ಸಾಕಷ್ಟು ಸುಳ್ಳು ಪ್ರಚಾರ ನಡೆಸಿದ್ದಾರೆ. ಧರ್ಮ- ಧರ್ಮಗಳ, ಜಾತಿ-ಜಾತಿ ಜಾತಿಗಳ ನಡುವೆ ದ್ವೇಷ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಸುಳ್ಳು ಪ್ರಚಾರಕ್ಕೆ ಜನರು ಸೊಪ್ಪು ಹಾಕುವುದಿಲ್ಲ. ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರದಲ್ಲಿ ಗೆಲ್ಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ