
ಪ್ರಗತಿವಾಹಿನಿ ಸುದ್ದಿ: ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಜೀವಬೆದರಿಕೆ ಹಾಕಿದ್ದ ಆರೋಪಿಯನ್ನು ಗದಗ ಪೊಲೀಸರು ಬಂಧಿಸಿದ್ದಾರೆ.
ವೀರಣ್ಣ ಬೀಳಗಿ ಬಂಧಿತ ಆರೋಪಿ. ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಫೇಸ್ ಬುಕ್ ನಲ್ಲಿ ವೀರಣ್ಣ ಬೀಳಗಿ ಬೆದರಿಕೆ ಹಾಕಿದ್ದ. ಸಚಿವರನ್ನು ಅವಹೇಳನಕರವಾಗಿ ನಿಂದಿಸಿ ಪೋಸ್ಟ್ ಹಾಕಿದ್ದಲದೇ ಎಕೆ-೪೭ ನಿಂದ ಗುಂಡಿನ ಮಳೆಗರೆಯಬೇಕು ಎಂದು ಬೆದರಿಕೆ ಹಾಕಿದ್ದ.
ಬಿ.ಬಿ.ಅಸೂಟಿ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಗದಗ ನಗರ ಬೆಟಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿ ವೀರಣ ಬೀಳಗಿಯನ್ನು ಬಂಧಿಸಿದ್ದಾರೆ. ಈತ ರೋಣ ತಾಲೂಕಿನ ಸೂಡಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.


