Latest

*ಹೆಚ್.ಎಂ.ಗೋಪಾಲಕೃಷ್ಣಗೆ ಟಿಕೆಟ್ ನೀಡುವಂತೆ ಬೆಂಬಲಿಗರ ಒತ್ತಾಯ; ವಿಷದ ಬಾಟಲಿ ಹಿಡಿದು ಕೆಪಿಸಿಸಿ ಕಚೇರಿ ಮುಂದೆ ಹೈಡ್ರಾಮಾ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ಼್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಕ್ಷೇತ್ರದಲ್ಲಿ ಹೆಚ್ ಎಂ ಗೋಪಿಕೃಷ್ಣ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಬೆಂಬಲಿಗರು ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಾವಿರಾರು ಬೆಂಬಲಿಗರು, ಗೋಪಾಲಕೃಷ್ಣಗೆ ಟಿಕೆಟ್ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

Home add -Advt

ವಿಷದ ಬಾಟಲಿ ಕಿತ್ತುಕೊಳ್ಳಲು ಮುಂದಾದ ಪೊಲೀಸರೊಂದಿಗೆ ಬೆಂಬಲಿಗರು ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಥಳಕ್ಕೆ ಆಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದಾರೆ.

https://pragati.taskdun.com/bikecaraccidentfatherdaughterdeathramanagara/


Related Articles

Back to top button