Kannada NewsKarnataka NewsLatest
*BREAKING: ಹೆಚ್.ಎಂ.ರೇವಣ್ಣ ಪುತ್ರನ ಕಾರು ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರ ಪುತ್ರ ಶಶಾಂಕ್ ಒದೆತನದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಲಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ೨೭ ವರ್ಷದ ರಾಜೇಶ್ ಮೃತ ಯುವಕ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ವೇಳೆ ಹೆಚ್.ಎಂ.ರೇವಣ್ಣ ಅವರ ಪುತ್ರ ಶಶಾಂಕ್ ಕೂಡ ಕಾರಿನಲ್ಲಿ ಇದ್ದರು. ಆದರೆ ಕಾರನ್ನು ಚಾಲಕ ಓಡಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




