
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸೊಹೋಟಗೊಂಡಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹೆಚ್.ಎನ್.ರವೀಂದ್ರ ರಾಜೀನಾಮೆ ನೀಡಿದ್ದಾರೆ.
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಇಂತದ್ದೊಂದುಬೆಳವಣಿಗೆ ನಡೆದಿದೆ. ಮಂಡ್ಯ ಕಾಂಗ್ರೆಸ್ ನಲ್ಲಿ ವೆಂಕಟರಮಣ ಗೌಡ ಅಲಿಯಾಸ್ ಸ್ಟಾರ್ ಚಂದ್ರುಗೆ ಹೆಚ್ಚಿನ ಆದ್ಯತೆ ನೀಡಿತ್ತಿರುವ ಹಿನೆಲೆಯಲ್ಲಿ ಬೇಸರಗೊಂಡು ರವೀಂದ್ರನಾಥ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾತನಾಡಿರುವ ಹೆಚ್.ಎನ್.ರವೀಂದ್ರ, ವಿಧಾನಸಭೆ ಚುನವಣೆ ವೇಳೆ ನನಗೆ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ ಕೊನೆಕ್ಷಣದಲ್ಲಿ ಮೇಲುಕೋಟೆ ಕ್ಶೇತ್ರವನ್ನು ರೈತಸಂಘಕ್ಕೆ ಬಿಟ್ಟುಕೊಡುವ ಬಗ್ಗೆ ತೀರ್ಮಾನ ಆಯಿತು. ಈ ಬಗ್ಗೆ ನನ್ನನ್ನು ಒಂದು ಮಾತು ಸೌಜನ್ಯಕ್ಕೂ ಕೇಳಿಲ್ಲ. ಕಾರ್ಯಕರ್ತರು ಕೂದ ಬೇಸರ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಗಲು ಹಣವೇ ಮುಖ್ಯ. ಡಿ.ಕೆ.ಶಿವಕುಮಾರ್ ಅವರು ನನ್ನ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಸ್ಥಾನ ನೀಡಿದ್ದರು. ಆದರೆ ಇಂದು ವಾತಾವರಣ ಕಲುಷಿತವಾಗಿದೆ. ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ