ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಳಬಾಗಿಲು ಶಾಸಕ ನಾಗೇಶ್, ಜೆಡಿಎಸ್ ಮುಖಂಡ, ಮಾಜಿ ಎಂಎಲ್ಸಿ ವೈ.ಎಸ್.ವಿ ದತ್ತ, ಮೈಸೂರಿನ ಬಿಜೆಪಿ ಮುಖಂಡ, ಮುಡಾ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಅವರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಧ್ರುವನಾರಾಯಣ್, ಹಿರಿಯ ಮುಖಂಡ ಡಾ. ಬಿ.ಎಲ್. ಶಂಕರ್, ಮಾಜಿ ಎಂಎಲ್ ಸಿ ರಮೇಶ್ ಬಾಬು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಎಲ್ಲರನ್ನೂ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ ಸರಕಾರದ ದುರಾಡಳಿತದಿಂದ ರಾಜ್ಯದಲ್ಲಿ ಅತಂತ್ರ ಸ್ಥಿತಿ ಎದುರಾಗಿದೆ. ಆಡಳಿತ ಪಕ್ಷದ ಮೇಲೆ ಜನರ ವಿಶ್ವಾಸ ಕಡಿಮೆ ಆಗುತ್ತಿದೆ. ಬೇರೆ ಪಕ್ಷಗಳ ಅನೇಕ ನಾಯಕರು ಕಾಂಗ್ರೆಸ್ ಸೇರಲು ಮುಂದೆ ಬಂದಿದ್ದಾರೆ. ಬಿಜೆಪಿಗೆ ಸರ್ಕಾರ ನಡೆಸಲು, ಜನರಿಗೆ ಉತ್ತಮ ಆಡಳಿತ ನೀಡಲು ಆಗುತ್ತಿಲ್ಲ. ಜನ ನಿತ್ಯ ನೋವು ಅನುಭವಿಸುತ್ತಿದ್ದಾರೆ ಎಂದು ಇಂದು ಅನೇಕ ನಾಯಕರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎಂದರು.
ಬಿಜೆಪಿ ಸೇರಿದವರು, ಬಿಜೆಪಿಯಲ್ಲಿ ಇರುವ ಬಹಳ ನಾಯಕರು ಒಳಗೊಳಗೇ ಅನೇಕ ಚರ್ಚೆ ಮಾಡುತ್ತಿದ್ದು, ಆ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಎಂದ ಡಿಕೆಶಿ, ಇಂದು ಮೂವರು ಪ್ರಮುಖ ನಾಯಕರು ಕಾಂಗ್ರೆಸ್ ಸೇರಲು ಬಂದಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ನಾಯಕರಾಗಿದ್ದ ವೈಎಸ್ ವಿ ದತ್ತಾ ಅವರು, ಬಿಜೆಪಿ ಸಹ ಸದಸ್ಯರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದ ಹಾಲಿ ಶಾಸಕ ನಾಗೇಶ್ ಕಾಂಗ್ರೆಸ್ ಪಕ್ಷದ ಸಹ ಸದಸ್ಯರಾಗಿ ವಿಧಾನಸಭೆಯಲ್ಲಿ ಸ್ಥಾನ ಪಡೆಯಲಿದ್ದಾರೆ. ಇವರಿಗೆ ಕಾಂಗ್ರೆಸ್ ಪಕ್ಷದ ಸಹ ಸದಸ್ಯತ್ವ ನೀಡಲಾಗುತ್ತಿದೆ ಎಂದರು.
ಇವರೆಲ್ಲರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮುನ್ನ ಪಕ್ಷದ ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಲಾಗಿದೆ. ಪಕ್ಷ ತನ್ನ ನಾಯಕರು ಹಾಗೂ ಕಾರ್ಯಕರ್ತರನ್ನು ವಿಸ್ತರಿಸಿಕೊಳ್ಳುತ್ತಿದೆ.
ಇದು ಆರಂಭ. ಇನ್ನು ಮುಂದೆ ಪ್ರತಿವಾರ ಅಥವಾ ಮೂರು ದಿನಕ್ಕೆ ಒಂದೊಂದು ದಿನ ಪಕ್ಷ ಸೇರ್ಪಡೆ ಕಾರ್ಯಕ್ರಮ ಇಟ್ಟುಕೊಳ್ಳಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಪರ್ವ ಆರಂಭವಾಗಿದ್ದು, ರಾಜ್ಯದ ಜನ ಈಗಾಗಲೇ ತಮ್ಮ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ನಿರೀಕ್ಷೆಗೂ ಮೀರಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರ ಪಡೆಯಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಪಕ್ಷ ಬೇರೆ ನಾಯಕರ ಷರತ್ತು ಒಪ್ಪಿ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಯಾರು ಬೇಷರತ್ತಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿ ಕೆಲಸ ಮಾಡಲು ಬಯಸುತ್ತಾರೆ ಅಂತಹವರನ್ನು ಮಾತ್ರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಪಕ್ಷ ಅವರ ಅರ್ಹತೆಗೆ ತಕ್ಕಂತೆ ಪಕ್ಷ ಅವರಿಗೆ ಸ್ಥಾನಮಾನ ನೀಡಲಿದೆ. ವ್ಯಕ್ತಿಗಿಂತ ನಮಗೆ ಪಕ್ಷ ಮುಖ್ಯ. ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲಾ ರೀತಿಯ ಲೆಕ್ಕಾಚಾರ ಮಾಡಿ ನಾವು ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಕಿರಿಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಖಾನಾಪುರ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಗುರು-ಶಿಷ್ಯೆ ಸರಸ ಸಲ್ಲಾಪ
https://pragati.taskdun.com/khanapura-guru-disciple-romance-which-went-viral-on-social-media/
ಮದುವೆ ಮುನ್ನಾ ದಿನ ಕುಸಿದು ಬಿದ್ದು ಮೃತಪಟ್ಟ ಯುವತಿ
https://pragati.taskdun.com/girl-died-previous-day-of-her-marriage/
ಬಹುಕೋಟಿ ಹಗರಣದ ಆರೋಪಿ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು
https://pragati.taskdun.com/lalith-modi-admited-hospital-in-london/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ