
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು.
ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ದೊರೆಸ್ವಾಮಿ ಇದೀಗ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
1918 ಏಪ್ರಿಲ್ 10ರಂದು ಹಾರೋಹಳ್ಳಿಯಲ್ಲಿ ಜನಿಸಿದ್ದ ದೊರೆಸ್ವಾಮಿ ಪ್ರಾಥಮಿಕ ಶಿಕ್ಷಣದ ಬಳಿಕ ಬೆಂಗಳೂರಿಗೆ ಹೆಚ್ಚಿನ ಶಿಕ್ಷಣಕ್ಕಾಗಿ ಬಂದಿದ್ದರು. 1942ರ ಹೊತ್ತಿಗೆ, ಅವರು ತಮ್ಮ ಬಿ.ಎಸ್.ಸಿ ಯನ್ನು ಪೂರ್ಣಗೊಳಿಸಿದರು ಮತ್ತು ಉಪನ್ಯಾಸಕರಾಗಿ ಕಾಲೇಜಿನಲ್ಲಿ ಸೇರಿಕೊಂಡರು. ಆಗಸ್ಟ್ನಲ್ಲಿ, ಕ್ವಿಟ್ ಇಂಡಿಯಾ ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡರು. ಅವರ ಸಹೋದರ ಹೆಚ್. ಎಸ್. ಸೀತಾರಾಮ್ ಅವರ ಜೊತೆಯಲ್ಲಿ ಸರ್ದಾರ್ ವೆಂಕಟರಾಮಯ್ಯ ಮತ್ತು ಎ. ಜಿ. ರಾಮಚಂದ್ರ ರಾವ್ ಬ್ರಿಟೀಷರ ವಿರುದ್ಧ ಒಟ್ಟಿಗೆ ಚಲಿಸಬೇಕೆಂದು ಯೋಜಿಸಿದರು.
ಕ್ವಿಟ್ ಇಂಡಿಯಾ ಚಳುವಳಿ ವೇಳೆ ದೊರೆಸ್ವಾಮಿ 14 ತಿಂಗಳ ಕಾಲ ಮೊದಲ ಬಾರಿಗೆ ಜೈಲುವಾಸ ಅನುಭವಿಸಿದ್ದರು. ಅಹಿಂಸೆ ಮತ್ತು ಸತ್ಯಾಗ್ರಹದಲ್ಲಿ ಗಾಂಧಿಯವರ ಆದರ್ಶಗಳನ್ನು ಅನುಸರಿಸಲು ನಿರ್ಧರಿಸಿದರು. .
ಸ್ವಾತಂತ್ರ ಚಳುವಳಿ, ಭೂಕಬಳಿಕೆ ವಿರುದ್ಧದ ಹೋರಾಟ ಸೇರಿದಂತೆ ಹಲವು ಸಾಮಾಜಿಕ ಹೋರಾಟದಲ್ಲಿ ದೊರೆಸ್ವಾಮಿ ಭಾಗಿಯಾಗಿದ್ದರು.
ಇನ್ನಷ್ಟು ದಿನ ಕರುನಾಡಿಗೆ ಬೀಳುತ್ತಾ ಬೀಗ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ