ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಅಂತೂ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ ರಾಜಿನಾಮೆ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರಿಗೆ ರಾಜಿನಾಮೆ ಪತ್ರ ಸಲ್ಲಿಸಿರುವುದಾಗಿ ವಿಶ್ವನಾಥ ಹೇಳಿದರು.
ಕಳೆದ ಕೆಲವು ದಿನಗಳಿಂದ ವಿಶ್ವನಾಥ ಜೆಡಿಎಸ್ ನಾಯಕರ ವಿರುದ್ಧವೇ ವಾಗ್ಬಾಣ ಬಿಡುತ್ತಿದ್ದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಾವು ಹೇಳಿದವರಿಗೇ ಟಿಕೆಟ್ ನೀಡಿಲ್ಲ. ಪಕ್ಷದ ಅಧ್ಯಕ್ಷನಾಗಿ ನನಗೆ ಸ್ವಲ್ಪವೂ ಬೆಲೆ ಇಲ್ಲ ಎನ್ನುವ ರೀತಿಯಲ್ಲಿ ಬಹಿರಂಗ ಹೇಳಿಕೆ ನೀಡಿದ್ದರು.
ಮೈತ್ರಿ ಸರಕಾರದ ಪಾಲುದಾರ ಪಕ್ಷದ ನಾಯಕರ ವಿರುದ್ಧವೂ ವಿಶ್ವನಾಥ ಹಲವಾರು ಬಾರಿ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ ವಿರುದ್ಧವಂತೂ ತೀವ್ರ ಕಿಡಿ ಕಾರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ