ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನುಡಿದಂತೆ ನಡೆದ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಬೆಂಬಲಕ್ಕೆ ನಾವಿದ್ದೇವೆ. ವಿಧಾನ ಪರಿಷತ್ ಸ್ಥಾನ ನೀಡಿದ್ದಕ್ಕಾಗಿ ಧನ್ಯವಾದಗಳು ಎಂದು ಹೆಚ್. ವಿಶ್ವನಾಥ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತಾಡಿದ ಹೆಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪ ಎಂದರು. ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ