Latest

ರಾಜ್ಯದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರದ ಸುಳಿವು ನೀಡಿದ್ರಾ ವಿಶ್ವನಾಥ್?

ಪ್ರಗತಿವಾಹಿನಿ ಸುದ್ದಿ; ಹಾಸನ: 2020ರ ಕೊನೆಯ ವೇಳೆಗೆ ದೊಡ್ಡ ಮಟ್ಟದಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಹೇಳುವ ಮೂಲಕ ಮಾಜಿ ಸಂಸದ ಹೆಚ್ ವಿಶ್ವನಾಥ್ ಕುತೂಹಲವನ್ನುಂಟು ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವದ ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ.

ಹಾಸನದಲ್ಲಿ ಮಾತನಾಡಿದ ಅವರು, ಹಲವು ರಾಜಕೀಯ ವಿಚಾರವನ್ನು ಮಾತನಾಡುತ್ತಾ ಈ ವರ್ಷಾಂತ್ಯದ ವೇಳೆಗೆ ಸಾಕಷ್ಟು ದೊಡ್ಡ ಮಟ್ಟದ ರಾಜಕೀಯ ಧ್ರುವೀಕರಣವಾಗಲಿದೆ ಎಂದರು.

Home add -Advt

ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದು, ಕಾಂಗ್ರೆಸ್ ಗೆ ಪುನರ್ಜನ್ಮ ನೀಡಬೇಕು ಎನ್ನುವುದಾದರೆ ಅದು ಪ್ರಿಯಾಂಕಾ ಗಾಂಧಿಯಿಂದ ಮಾತ್ರ ಸಾಧ್ಯ ಹೊರತು ರಾಹುಲ್ ಗಾಂಧಿಯಿಂದ ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನು ದೇವೇಗೌಡರು ರಾಜ್ಯ ಸಭೆಗೆ ಸ್ಪರ್ಧಿಸುವ ಬಗ್ಗೆ ಮಾತನಾಡಿ, ಅವರು ರಾಜ್ಯಸಭೆಗೆ ಬರುವ ಮೂಲಕ ಅವರ ಅನುಭವವನ್ನು ನೀಡಬೇಕು. ಅವರ ಆಯ್ಕೆ ಆಗಬೇಕು ಎಂಬುದು ಎಲ್ಲರ ಆಶಯವಾಗಿದೆ ಎಂದು ತಿಳಿಸಿದರು.

Related Articles

Back to top button