Karnataka NewsLatestPolitics

*ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಹೆಚ್.ವಿಶ್ವನಾಥ್*

ಪ್ರಗತಿವಾಹಿನಿ ಸುದ್ದಿ: ಹಿರಿಯ ರಾಜಕಾರಣಿ, ವಿಧಾನ ಪರಿಷತ್ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಮುಂದಿನ ದಿನಗಳಲ್ಲಿ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ತಿಳಿಸಿದರು.

ರಾಜಕೀಯದಲ್ಲಿ ಮುಂದುವರೆಯುತ್ತೇನೆ. ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ ಆರ ಅಭಿಮಾನೋತ್ಸವ ಕಾರ್ಯಕ್ರಮದ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಪೋಕ್ಸೋ ಪ್ರಕರಣದ ಗಂಭೀರ ಆತ್ರೋಪ ಎದುರಿಸುತ್ತಿದ್ದಾರೆ. ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಅಭಿಮಾನೋತ್ಸವ ನಡೆಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button