Karnataka NewsLatestPolitics

*ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಸಾಲದ ಹಣ ವಾಪಸ್ ಕೇಳಲು ಹೋಗಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಹೆಚ್.​​​ ವಿಶ್ವನಾಥ್ ವಿರುದ್ಧ ದೇವರಾಜ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್​ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಂಎಲ್‌ಸಿ ವಿಶ್ವನಾಥ್‌, ಈ ಪ್ರಕರಣದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕುಮ್ಮಕ್ಕಿದೆ. ಪ್ರಕರಣ ಸಂಬಂಧ ಪೊಲೀಸರ ನೋಟಿಸ್​ಗೆ ಉತ್ತರ ಕೊಟ್ಟಿದ್ದೇನೆ. ಆದರೂ ಕೂಡ ಎಫ್‌ಐಆರ್ ದಾಖಲಿಸಿ ನನ್ನ ತೇಜೋವಧೆ ಮಾಡುತ್ತಿದ್ದಾರೆ. ಇದರಲ್ಲಿ ಯತೀಂದ್ರ ಕುಮ್ಮಕ್ಕು ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button