
ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶಾದ್ಯಂತ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಹೆಚ್3ಎನ್ 2 ವೈರಸ್ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಕಳೆದ ಕೆಲ ವಾರಗಳಿಂದ ದೇಶದಲ್ಲಿ ಹೆಚ್3ಎನ್2 ವೈರಸ್ ಹೆಚ್ಚುತ್ತಿದ್ದು, ಹಲವರು ಸಾವನ್ನಪ್ಪಿದ್ದಾರೆ. ಇದೀಗ 23 ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಈ ವೈರಸ್ ಗೆ ಬಲಿಯಾಗಿದ್ದಾನೆ.
ಅಹಮದ್ ನಗರದ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಕಳೆದ ವಾರ ಕೊಂಕಣದ ಅಲಿಭಾಗ್ ಗೆ ಸ್ನೇಹಿತರೊಂದಿಗೆ ಪಿಕ್ ನಿಕ್ ಗೆ ತೆರಳಿದ್ದ ವಾಪಸ್ ಆದ ಬಳಿಕ ಅನಾರೋಗ್ಯಕ್ಕೀಡಾಗಿದ್ದ. ತಪಾಸಣೆ ವೇಳೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಅಹಮದ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಈಗ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹೆಚ್ 3ಎನ್ 2 ವೈರಸ್ ನಿಂದ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
					
				
					
					
					
					
					
					
					


